ADVERTISEMENT

ಪಕ್ಷೇತರರ ಭವಿಷ್ಯ ಇಂದು ನಿರ್ಧಾರ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2011, 18:30 IST
Last Updated 13 ಫೆಬ್ರುವರಿ 2011, 18:30 IST

ಬೆಂಗಳೂರು: ಬಿಜೆಪಿ ಸರ್ಕಾರಕ್ಕೆ ಬೆಂಬಲ ವಾಪಸ್ ಪಡೆದ ಕಾರಣಕ್ಕೆ ಅನರ್ಹಗೊಂಡ ಐವರು ಪಕ್ಷೇತರ ಶಾಸಕರ ರಾಜಕೀಯ ಭವಿಷ್ಯವನ್ನು ಹೈಕೋರ್ಟ್ ಸೋಮವಾರ ನಿರ್ಧರಿಸಲಿದೆ.

ಪಿ.ಎಂ. ನರೇಂದ್ರ ಸ್ವಾಮಿ, ಗೂಳಿಹಟ್ಟಿ ಶೇಖರ್, ವೆಂಕಟರಮಣಪ್ಪ, ಡಿ. ಸುಧಾಕರ ಹಾಗೂ ಶಿವರಾಜ ತಂಗಡಗಿ ಅವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಮೋಹನಶಾಂತನಗೌಡರ್ ನೇತೃತ್ವದ ಪೂರ್ಣ ಪೀಠ ನಾಲ್ಕು ಗಂಟೆಗೆ ತೀರ್ಪು ಪ್ರಕಟಿಸಲಿದೆ.

11ಮಂದಿ ಶಾಸಕರ ಪ್ರಕರಣದಲ್ಲಿ ತೀರ್ಪು ಪ್ರಕಟಿಸಿದ್ದ ಇಬ್ಬರು ನ್ಯಾಯಮೂರ್ತಿಗಳ ವಿಭಾಗೀಯ ಪೀಠದಲ್ಲಿ ವಿಭಿನ್ನ ಅಭಿಪ್ರಾಯ ವ್ಯಕ್ತವಾಗಿ, ನಂತರ ಅದನ್ನು ಮೂರನೇ ನ್ಯಾಯಮೂರ್ತಿಗೆ ಒಪ್ಪಿಸಲಾಗಿತ್ತು. ಆದರೆ ಐವರು ಶಾಸಕರ ಪ್ರಕರಣದ ವಿಚಾರಣೆಯನ್ನು ಮೂವರು ನ್ಯಾಯಮೂರ್ತಿಗಳ ಪೀಠ ನಡೆಸಿರುವ ಕಾರಣ, ಒಂದು ವೇಳೆ ವಿಭಿನ್ನ ನಿಲುವು ವ್ಯಕ್ತವಾದರೂ ಇಬ್ಬರು ನ್ಯಾಯಮೂರ್ತಿಗಳು ಯಾವ ನಿಲುವು ವ್ಯಕ್ತಪಡಿಸುತ್ತಾರೆಯೋ ಅದೇ ಊರ್ಜಿತಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT