ADVERTISEMENT

ಪಡಿತರ ಸಾಗಾಣಿಕೆ: ಸರ್ಕಾರದ ಹೊಣೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2012, 19:30 IST
Last Updated 21 ಮಾರ್ಚ್ 2012, 19:30 IST

ಬೆಂಗಳೂರು: ಸಾರ್ವಜನಿಕ ವಿತರಣಾ ವ್ಯವಸ್ಥೆಯ ಅಡಿಯಲ್ಲಿ ವಿತರಿಸುವ ಪಡಿತರ ಸಾಗಣೆಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಂಸ್ಥೆಗಳ ಮೂಲಕವೇ ನಿರ್ವಹಿಸುವ ಪ್ರಾಯೋಗಿಕ ಯೋಜನೆಯನ್ನು ಮುಂದಿನ (2012-13) ಸಾಲಿನಲ್ಲಿ ಜಾರಿಗೆ ತರುವುದಾಗಿ ಘೋಷಿಸಲಾಗಿದೆ.

ಪ್ರಸ್ತುತ ಪಡಿತರ ಸಾಗಾಣಿಕೆ ಜವಾಬ್ದಾರಿಯನ್ನು ಗುತ್ತಿಗೆದಾರರು ನೀಡಲಾಗುತ್ತಿದೆ. ಅದನ್ನು ನ್ಯಾಯಬೆಲೆ ಅಂಗಡಿಗಳ ಮುಖ್ಯಸ್ಥರಿಗೆ ನೀಡುವ ಹೊಸ ಪದ್ಧತಿ ಜಾರಿಗೊಳಿಸುವ ಪ್ರಯತ್ನ ಪ್ರಗತಿಯಲ್ಲಿತ್ತು. ಈಗ ಸರ್ಕಾರಿ ಸಂಸ್ಥೆಗಳ ಮೂಲಕವೇ ಸಾಗಾಣಿಕೆ ಮಾಡುವ ಯೋಜನೆಯನ್ನು ಪ್ರಾಯೋಗಿಕವಾಗಿ ಕೈಗೆತ್ತಿಕೊಳ್ಳುವ ಘೋಷಣೆ ಬಜೆಟ್‌ನಲ್ಲಿ ಹೊರಬಿದ್ದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.