ADVERTISEMENT

ಪತ್ರಕರ್ತ ರವಿ ಬೆಳಗೆರೆಗೆ ನ್ಯಾಯಾಂಗ ಬಂಧನ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2017, 7:30 IST
Last Updated 11 ಡಿಸೆಂಬರ್ 2017, 7:30 IST
ಪತ್ರಕರ್ತ ರವಿ ಬೆಳಗೆರೆಗೆ ನ್ಯಾಯಾಂಗ ಬಂಧನ
ಪತ್ರಕರ್ತ ರವಿ ಬೆಳಗೆರೆಗೆ ನ್ಯಾಯಾಂಗ ಬಂಧನ   

ಬೆಂಗಳೂರು: ಪತ್ರಕರ್ತ ರವಿ ಬೆಳಗೆರೆ ಅವರಿಗೆ 1ನೇ ಎಸಿಎಂಎಂ ನ್ಯಾಯಾಲಯ ಸೋಮವಾರ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ‘ಹಾಯ್‌ ಬೆಂಗಳೂರು’ ಪತ್ರಿಕೆ ಸಂಸ್ಥಾಪಕ ರವಿ ಬೆಳಗೆರೆ ಅವರ ವಿಚಾರಣೆ ಪೂರ್ಣಗೊಳಿಸಿ ಸಿಸಿಬಿ ಪೊಲೀಸರು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶರು ಡಿ.23ರ ವರೆಗೂ ಬೆಳಗೆರೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು.

ADVERTISEMENT

ಕಪ್ಪು ಅಂಗಿ ನೀಲಿ ಜೀನ್ಸ್ ಪ್ಯಾಂಟ್ ಧರಿಸಿದ್ದ ಬೆಳಗೆರೆ ಅವರು ಬಲಗಾಲು ಹೆಬ್ಬೆರಳಿಗೆ ಬ್ಯಾಂಡೇಜ್ ಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.