ADVERTISEMENT

ಪತ್ರಕರ್ತ ರವಿ ಬೆಳಗೆರೆಗೆ ಹೈಕೋರ್ಟ್ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2018, 9:11 IST
Last Updated 5 ಏಪ್ರಿಲ್ 2018, 9:11 IST
ರವಿ ಬೆಳಗೆರೆ
ರವಿ ಬೆಳಗೆರೆ   

ಬೆಂಗಳೂರು: ಸಹೋದ್ಯೋಗಿ ಪತ್ರಕರ್ತನ ಕೊಲೆಗೆ ಸುಪಾರಿ ನೀಡಿದ ಆರೋಪದಲ್ಲಿ ರವಿ ಬೆಳಗೆರೆ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಈ ಪ್ರಕರಣದಲ್ಲಿ ಅಧೀನ ನ್ಯಾಯಾಲಯ ಬೆಳಗೆರೆಗೆ ನೀಡಿರುವ ಜಾಮೀನು ರದ್ದು ಗೊಳಿಸುವಂತೆ ಕೋರಿ ಪ್ರಾಸಿಕ್ಯೂಷನ್ ಸಲ್ಲಿಸಿರುವ ಅರ್ಜಿಯನ್ನು ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ಬಳಿಕ ಬೆಳಗೆರೆಗೆ ನೋಟಿಸ್ ಜಾರಿಗೊಳಿಸಲು ಕೋರ್ಟ್‌ ಆದೇಶಿಸಿದೆ.

ADVERTISEMENT

ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಆರೋಪವನ್ನು ಬೆಳಗೆರೆ ಎದುರಿಸುತ್ತಿದ್ದಾರೆ.

‘ಬೆಳಗೆರೆ ಹಳೆಯ ವೈದ್ಯಕೀಯ ದಾಖಲೆಗಳನ್ನು ನೀಡಿ ಜಾಮೀನು ಪಡೆದಿದ್ದಾರೆ. ಕೋರ್ಟ್‌ಗೆ ಸುಳ್ಳು ದಾಖಲೆಗಳನ್ನು ಒದಗಿಸಿದ್ದಾರೆ. ಆದ್ದರಿಂದ ಅಧೀನ ನ್ಯಾಯಾಲಯ ಅವರಿಗೆ ನೀಡಿರುವ ಜಾಮೀನು ರದ್ದುಗೊಳಿಸಬೇಕು’ ಎಂದು ಸಿಸಿಬಿ ಪೊಲೀಸರು ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.