ADVERTISEMENT

ಪರೀಕ್ಷಾ ಕೆಲಸದಿಂದ ಶಿಕ್ಷಕ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2018, 19:30 IST
Last Updated 28 ಮಾರ್ಚ್ 2018, 19:30 IST

ಕಲಬುರ್ಗಿ: ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಮೇಲ್ವಿಚಾರಕರೊಬ್ಬರನ್ನು ಪರೀಕ್ಷಾ ಕೆಲಸದಿಂದ ಬುಧವಾರ ಬಿಡುಗಡೆಗೊಳಿಸಲಾಗಿದೆ.

‘ನಗರದ ಸೇಂಟ್ ಜೋಸೆಫ್ ಶಾಲೆಯಲ್ಲಿ ಇಂಗ್ಲಿಷ್ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆ ಮೇಲ್ವಿಚಾರಕ, ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉರ್ದು ಶಿಕ್ಷಕ ಶಕೀಲ್ ರಿಜ್ವಾನ್ ಅವರು ತಪಾಸಣೆ ನೆಪದಲ್ಲಿ ಪದೇಪದೇ ಬಂದು ಮೈಮುಟ್ಟಿದ್ದಾರೆ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ವಿದ್ಯಾರ್ಥಿನಿ ಪರೀಕ್ಷೆ ನಡೆಯುತ್ತಿರುವಾಗಲೇ ಮುಖ್ಯ ಶಿಕ್ಷಕರಿಗೆ ದೂರು ನೀಡಿದ್ದರು.

ವಿಷಯ ಅರಿತ ಕಲಬುರ್ಗಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಇ.ಖಾನ್ ಪರೀಕ್ಷಾ ಕೇಂದ್ರಕ್ಕೆ ಹೋಗಿ, ವಿದ್ಯಾರ್ಥಿನಿ ಹಾಗೂ ಶಾಲೆಯ ಮುಖ್ಯ ಶಿಕ್ಷಕರಿಂದ ಮಾಹಿತಿ ಪಡೆದರು.

ADVERTISEMENT

‘ವಿದ್ಯಾರ್ಥಿನಿಯ ಆರೋಪವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸಿ.ಸಿ ಟಿ.ವಿ ಕ್ಯಾಮೆರಾದ ದೃಶ್ಯಾವಳಿ ಪರಿಶೀಲಿಸಿದ್ದು, ಅನುಚಿತವಾಗಿ ವರ್ತಿಸಿರುವುದು ಕಂಡುಬಂದಿಲ್ಲ. ಆದರೂ ಈ ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಶಾಲೆಯ ಮುಖ್ಯ ಶಿಕ್ಷಕರಿಗೆ ಸೂಚಿಸಲಾಗಿದೆ’ ಎಂದು ಬಿಇಒ ಜಿ.ಇ.ಖಾನ್ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.