ADVERTISEMENT

ಪರೇಶ್ ಮೇಸ್ತ ಕೊಲೆಗೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ: ಪ್ರಮೋದ್ ಮುತಾಲಿಕ್

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2017, 14:38 IST
Last Updated 12 ಡಿಸೆಂಬರ್ 2017, 14:38 IST
ಪರೇಶ್ ಮೇಸ್ತ ಕೊಲೆಗೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ: ಪ್ರಮೋದ್ ಮುತಾಲಿಕ್
ಪರೇಶ್ ಮೇಸ್ತ ಕೊಲೆಗೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ: ಪ್ರಮೋದ್ ಮುತಾಲಿಕ್   

ಯಾದಗಿರಿ: ಪರೇಶ್ ಮೇಸ್ತ ಸಾವು ಸಹಜವಲ್ಲ. ಅದೊಂದು ಕೊಲೆ. ಈ ಕೊಲೆಗೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಆಗಿದೆ. ಹಾಗಾಗಿ, ಸರ್ಕಾರ ಕೊಲೆ ಮುಚ್ವಿಹಾಕುವ ಷಡ್ಯಂತ್ರ ರೂಪಿಸುತ್ತಿದೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದರು.

ವಿರಾಟ್ ಹಿಂದೂ ಸಮಾವೇಶಕ್ಕೆ ಮಂಗಳವಾರ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ಸರ್ಕಾರ ಅನುಮತಿ ನೀಡುತ್ತಿಲ್ಲ. ಅದರೆ ರಂಜಾನ್, ಈದ್ ಮಿಲಾದ್ ಹಬ್ಬಗಳ ಮೆರವಣಿಗೆಗೆ ಅವಕಾಶ ಕಲ್ಪಿಸುತ್ತಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಹಿಂದೂಪರ ಸಂಘಟನೆಗಳ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿವೆ. ಜಗನ್ನಾಥ ಶೆಟ್ಡಿ ಆಯೋಗ ವರದಿ ಜಾರಿಗೊಳಿಸಲು ಈ ಸರ್ಕಾರ ಯಾಕೆ ಹಿಂದೇಡು ಹಾಕುತ್ತಿದೆ ಎಂಬ ಬಗ್ಗೆ ಸ್ಪಷ್ಟನೆ ನೀಡಬೇಕಿದೆ ಎಂದು ಆಗ್ರಹಿಸಿದರು.

ADVERTISEMENT

ಕುಮುಟಾ ಹಾಗೂ ಹೊನ್ನಾವರದಲ್ಲಿ ನಡೆದ ಗಲಭೆ ದುಃಖ ತಂದಿದೆ. ನಮ್ಮ ಕಾರ್ಯಕರ್ತರು ಶಾಂತಿ ಕಾಪಾಡಬೇಕು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.