ADVERTISEMENT

ಪರೇಶ್ ಮೇಸ್ತ ಸಾವಿನ ತನಿಖೆ ಆಗ್ರಹಿಸಿ ಪ್ರತಿಭಟನೆ: ಕಲ್ಲು ತೂರಾಟ, ಐಜಿಪಿ ಹೇಮಂತ್ ನಿಂಬಾಳ್ಕರ್ ವಾಹನಕ್ಕೆ ಬೆಂಕಿ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2017, 9:10 IST
Last Updated 11 ಡಿಸೆಂಬರ್ 2017, 9:10 IST
ಕಾರವಾರದಲ್ಲಿ ನಡೆದ ಪ್ರತಿಭಟನೆ
ಕಾರವಾರದಲ್ಲಿ ನಡೆದ ಪ್ರತಿಭಟನೆ   

ಕುಮಟಾ: ಪರೇಶ್ ಮೇಸ್ತ ಅನುಮಾನಾಸ್ಪದ ಸಾವಿನ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸೋಮವಾರ ಬಿಜೆಪಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಉದ್ರಿಕ್ತ ಜನರು ಪೊಲೀಸ್ ವಾಹನಗಳ‌ ಮೇಲೆ ಕಲ್ಲು ತೂರಾಟ ನಡೆಸಿದ್ದು, ಐಜಿಪಿ ಹೇಮಂತ್ ನಿಂಬಾಳ್ಕರ್ ಅವರ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.

ಘಟನೆಯಲ್ಲಿ ಕಾರಿನ ಚಾಲಕ ಗಾಯಗೊಂಡಿದ್ದಾರೆ. ಕಲ್ಲು ತೂರಾಟ ವೇಳೆ ಪಿಎಸ್ಐ ಇ.ಸಿ.ಸಂಪತ್ ಕುಮಾರ್ ಅವರಿಗೂ ಪೆಟ್ಟಾಗಿದೆ.

ADVERTISEMENT

ಉದ್ರಿಕ್ತ ಜನರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಅಲ್ಲದೇ ಅಶ್ರುವಾಯು ಸಿಡಿಸಿದರು.

ಅಂಗಡಿ ಮುಂಗಟ್ಟು ಬಂದ್ ಆಗಿವೆ. ಪಟ್ಟಣದ ಗಿಬ್ಸ್ ವೃತ್ತದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

25 ಮಂದಿ ವಶ: ಘಟನೆಗೆ ಸಂಬಂಧಿಸಿದಂತೆ ಪೊಲೀಸರು 25 ಮಂದಿಯನ್ನು ಹಾಗೂ ಹಲವು ಬೈಕ್ ಗಳನ್ನು  ವಶಕ್ಕೆ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.