ಕಾರವಾರ: ಪರೇಶ್ ಮೇಸ್ತ ಸಾವಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿ ಬಿಜೆಪಿ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.
ಸ್ವಯಂ ಪ್ರೇರಿತ ಬಂದ್‌ಗೆ ಬಿಜೆಪಿ ಕರೆ ನೀಡಿದ್ದ ಹಿನ್ನೆಲೆಯಲ್ಲಿ ನಗರದ ಬಹುತೇಕ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿವೆ. ಸಾರಿಗೆ ಸಂಚಾರವನ್ನೂ ಬಲವಂತವಾಗಿ ಸ್ಥಗಿತಗೊಳಿಸಲಾಗಿದೆ. ಆದರೆ, ಶಾಲೆ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಲ ಕಾಲ ಪ್ರತಿಭಟನೆ ನಡೆಸಿ ಹೆದ್ದಾರಿ ತಡೆ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.