ADVERTISEMENT

ಪಾಕ್ ಧ್ವಜ: ಸಿಬಿಐ ತನಿಖೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಜನವರಿ 2012, 19:30 IST
Last Updated 9 ಜನವರಿ 2012, 19:30 IST

ಬೆಂಗಳೂರು:  ಸಿಂದಗಿ ತಹಶೀಲ್ದಾರ್ ಕಚೇರಿ ಮೇಲೆ ಪಾಕಿಸ್ತಾನದ ಧ್ವಜ ಹಾರಿಸಿದ ಘಟನೆಗೆ ಸಂಬಂಧಿಸಿದ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ರಾಜ್ಯ ಯುವ ಕಾಂಗ್ರೆಸ್ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರಿಗೆ ಮನವಿ ಸಲ್ಲಿಸಿದೆ.

ಸೋಮವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದ ಯುವ ಕಾಂಗ್ರೆಸ್ ಅಧ್ಯಕ್ಷ ರಿಜ್ವಾನ್ ಅರ್ಷದ್ ನೇತೃತ್ವದ ನಿಯೋಗ, ಪ್ರಕರಣವನ್ನು ಸಿಬಿಐಗೆ ತನಿಖೆಗೆ ಒಪ್ಪಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.