ADVERTISEMENT

ಪಿಂಚಣಿ ಹೋರಾಟದಲ್ಲಿ ರಾಜ್ಯದ 2,500 ನೌಕರರು ಭಾಗಿ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2017, 19:30 IST
Last Updated 3 ಅಕ್ಟೋಬರ್ 2017, 19:30 IST
ಪಿಂಚಣಿ ಹೋರಾಟದಲ್ಲಿ ರಾಜ್ಯದ 2,500 ನೌಕರರು ಭಾಗಿ
ಪಿಂಚಣಿ ಹೋರಾಟದಲ್ಲಿ ರಾಜ್ಯದ 2,500 ನೌಕರರು ಭಾಗಿ   

ಬೆಂಗಳೂರು: ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವಂತೆ ಆಗ್ರಹಿಸಿ  ಇದೇ 5ರಂದು ನವದೆಹಲಿಯಲ್ಲಿ ನಡೆಯುವ ಪ್ರತಿಭಟನೆಯಲ್ಲಿ ರಾಜ್ಯದ 2,500 ನೌಕರರು ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಸರ್ಕಾರಿ ನೂತನ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರ ಸಂಘ ತಿಳಿಸಿದೆ.

ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಒಕ್ಕೂಟ ಜಂತರ್‌ಮಂತರ್‌ನಲ್ಲಿ ಒಂದು ದಿನದ ಪ್ರತಿಭಟನೆಗೆ ಕರೆ ನೀಡಿದೆ. ಈ ಪ್ರತಿಭಟನೆ ಬಳಿಕ ರಾಜ್ಯದಲ್ಲಿಯೂ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ಹಳೆಯ ಪಿಂಚಣಿ ಯೋಜನೆ ಮತ್ತೆ ಜಾರಿಗೊಳಿಸುವಂತೆ ಆಗ್ರಹಿಸಲಾಗುವುದು ಎಂದು ಸಂಘದ ಅಧ್ಯಕ್ಷ ರಮೇಶ್ ಗಣೇಶ್ ಸಂಗಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT