ADVERTISEMENT

ಪಿಜಿ ವೈದ್ಯಕೀಯ ಕೋರ್ಸ್: ಇಂದು ಮರು ಕೌನ್ಸೆಲಿಂಗ್

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2011, 19:30 IST
Last Updated 12 ಸೆಪ್ಟೆಂಬರ್ 2011, 19:30 IST

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಸೇವಾನಿರತ ವೈದ್ಯರಿಗೆ ಮಂಗಳವಾರ ಮರು ಕೌನ್ಸೆಲಿಂಗ್ ನಡೆಯಲಿದೆ. ಸೀಟು ಹಂಚಿಕೆ ಪಟ್ಟಿ ವೆಬ್‌ಸೈಟ್‌ನಲ್ಲಿ ಲಭ್ಯವಿದೆ ಎಂದು ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವ ಡಾ.ಡಿ.ಪ್ರೇಮ್‌ಕುಮಾರ್ ತಿಳಿಸಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಜಯನಗರದಲ್ಲಿರುವ ವಿಶ್ವವಿದ್ಯಾಲಯ ಆವರಣದಲ್ಲಿ ಕೌನ್ಸೆಲಿಂಗ್ ನಡೆಯಲಿದ್ದು, ಸೇವಾನಿರತ ವೈದ್ಯರ ಅರ್ಹತಾ ಪಟ್ಟಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಇದೇ 9ರಂದು ಕೌನ್ಸೆಲಿಂಗ್ ನಡೆಸಲು ಉದ್ದೇಶಿಸಲಾಗಿತ್ತಾದರೂ ಕೊನೆಗಳಿಗೆಯಲ್ಲಿ ಯಾವುದೇ ಕಾರಣ ನೀಡದೆ ಮುಂದೂಡಲಾಗಿತ್ತು. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೂರನೇ ಬಾರಿಗೆ ಮರು ಕೌನ್ಸೆಲಿಂಗ್ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.