
ಪ್ರಜಾವಾಣಿ ವಾರ್ತೆಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಗುರುವಾರದಿಂದ ಆರಂಭವಾಗಲಿದ್ದು, ಮೊದಲ ದಿನ ಇತಿಹಾಸ ಮತ್ತು ಗಣಕ ವಿಜ್ಞಾನ ವಿಷಯದ ಪರೀಕ್ಷೆ ನಡೆಯಲಿದೆ.
ರಾಜ್ಯದ 923 ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಗೆ ಈ ಬಾರಿ ಒಟ್ಟು 5,96,097 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಸಂಖ್ಯೆ ಸುಮಾರು 60 ಸಾವಿರದಷ್ಟು ಕಡಿಮೆಯಾಗಿದೆ.
ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಬಿಗಿ ಬಂದೊಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
ಗುರುವಾರ ಆರಂಭವಾಗುವ ಪರೀಕ್ಷೆ ಇದೇ 31ಕ್ಕೆ ಮುಗಿಯಲಿದೆ. ಏಪ್ರಿಲ್ ಮೊದಲ ವಾರದಲ್ಲಿ ಮೌಲ್ಯಮಾಪನ ಆರಂಭವಾಗಲಿದೆ. ಮೇ ತಿಂಗಳ ಮೊದಲ ವಾರದಲ್ಲಿ ನಡೆಯುವ ಸಿಇಟಿ ಪರೀಕ್ಷೆ ನಂತರ ಪಿಯುಸಿ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.