ADVERTISEMENT

ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ದರ ಇಳಿಸಲು ಚಿಂತನೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2017, 19:30 IST
Last Updated 5 ಅಕ್ಟೋಬರ್ 2017, 19:30 IST
ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ದರ ಇಳಿಸಲು ಚಿಂತನೆ
ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ದರ ಇಳಿಸಲು ಚಿಂತನೆ   

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್‌ ಮೇಲಿನ ತೆರಿಗೆ ದರ ಇಳಿಸುವ ಕುರಿತು ಪರಿಶೀಲಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂಧನ ಬೆಲೆ ಹೆಚ್ಚಳಕ್ಕೆ ರಾಜ್ಯ ಸರ್ಕಾರಗಳ ಕಡೆ ಕೇಂದ್ರ ಸರ್ಕಾರ ಬೆರಳು ತೋರಿಸುತ್ತಿರುವುದು ಉಚಿತವಲ್ಲ. ರಾಜ್ಯ ಸರ್ಕಾರ ಈಗಾಗಲೇ ತೆರಿಗೆ ಕಡಿಮೆ ಮಾಡಿದೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮಲ್ಲಿ ದರ ಕಡಿಮೆ ಇದೆ ಎಂದು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಪ್ರತಿಪಾದಿಸಿದ್ದಾರೆ.

ಬೆಲೆ ಕಡಿಮೆ ಮಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಅದರಿಂದ ಕೇಂದ್ರ ನುಣುಚಿಕೊಳ್ಳುವುದು ಸರಿಯಲ್ಲ ಎಂದಿದ್ದಾರೆ.

ADVERTISEMENT

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಬ್ಯಾರೆಲ್ ಗೆ 130 ಡಾಲರ್ ಇದ್ದಾಗ ಪೆಟ್ರೋಲ್, ಡೀಸೆಲ್
ದರ ಎಷ್ಟು ಇತ್ತು, ಈಗ ಬ್ಯಾರೆಲ್‌ ಗೆ 42 ಡಾಲರ್ ಇರುವಾಗ ಎಷ್ಟು ಇದೆ ಎಂಬುದನ್ನು ರಾಜ್ಯದ ಜನರು ಗಮನಿಸಬೇಕು ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.