ಬೆಂಗಳೂರು: ಪೆಟ್ರೋಲ್ ದರ ಏರಿಸಿದ ಕೇಂದ್ರ ಸರ್ಕಾರ ಮತ್ತು ಬಸ್ ದರ ಏರಿಸಿದ ರಾಜ್ಯ ಸರ್ಕಾರದ ಕ್ರಮವನ್ನು ರಾಜ್ಯ ಬಿಜೆಪಿ ಮತ್ತು ಕೆಜೆಪಿ ಪಕ್ಷಗಳು ಖಂಡಿಸಿವೆ.
ಬಿಜೆಪಿ ಅಧ್ಯಕ್ಷ ಪ್ರಹ್ಲಾದ ಜೋಶಿ ಹಾಗೂ ಕೆಜೆಪಿ ಪ್ರಧಾನ ಕಾರ್ಯದರ್ಶಿ ಎಂ.ಡಿ.ಲಕ್ಷ್ಮೀನಾರಾಯಣ ಅವರು ಪ್ರತ್ಯೇಕ ಹೇಳಿಕೆಗಳನ್ನು ಬಿಡುಗಡೆ ಮಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕ್ರಮವನ್ನು ಖಂಡಿಸಿದ್ದಾರೆ.
ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಒಂದು ತಿಂಗಳಾಗಿದೆ. ಆಗಲೇ ಜನರ ಮೇಲೆ ಬರೆ ಎಳೆಯುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಎರಡೂ ಪಕ್ಷಗಳು ದೂರಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.