ಮೈಸೂರು: `ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಮಾಧ್ಯಮದವರು ಮತ್ತು ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಶನಿವಾರ ತಿಳಿಸಿದರು.
`ಸರ್ಕಾರಿ ಸವಲತ್ತುಗಳ ಸಂತೆ~ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೆಲಿಕಾಪ್ಟರ್‌ನಲ್ಲಿ ನಗರಕ್ಕೆ ಆಗಮಿಸಿದ ಅವರು ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ `ಹಲ್ಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ. ಸಮಾಜದಲ್ಲಿ ಆಗಾಗ್ಗೆ ನಡೆಯುತ್ತಿರುವ ಸಂಘರ್ಷಗಳನ್ನು ಹತ್ತಿಕ್ಕಲು ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
`ಹಲ್ಲೆ ನಡೆಸಿದ ಸಂದರ್ಭದಲ್ಲಿ ಪೊಲೀಸರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ನಿಭಾಯಿಸಿದರು. ಒಂದು ವೇಳೆ ಲಾಠಿ ಪ್ರಹಾರ, ಗುಂಡನ್ನು ಹಾರಿಸಿದ್ದರೆ ಹತ್ತಾರು ಹೆಣಗಳು ಉರುಳುತ್ತಿದ್ದವು. ಇದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ~ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.