ADVERTISEMENT

ಪೊಲೀಸ್ ಇಲಾಖೆ ಭಾರಿ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2012, 19:30 IST
Last Updated 17 ಆಗಸ್ಟ್ 2012, 19:30 IST

ಬೆಂಗಳೂರು: ಸರ್ಕಾರ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಶುಕ್ರವಾರ ಭಾರಿ ವರ್ಗಾವಣೆ ಮಾಡಿದ್ದು, 105 ಡಿವೈಎಸ್ಪಿಗಳು ಮತ್ತು 327 ಇನ್‌ಸ್ಪೆಕ್ಟರ್‌ಗಳನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ.

ಅಧಿಕಾರಿಗಳಿಗೆ ಸೂಚಿಸಿದ ಸ್ಥಳದಲ್ಲಿ ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸರ್ಕಾರ ತಿಳಿಸಿದೆ. ರಾಜ್ಯದಲ್ಲಿ ಸುಮಾರು 1,100 ಇನ್‌ಸ್ಪೆಕ್ಟರ್‌ಗಳಿದ್ದಾರೆ ಮತ್ತು 400 ಮಂದಿ ಡಿವೈಎಸ್ಪಿಗಳಿದ್ದಾರೆ. ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಪೊಲೀಸ್ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮಟ್ಟದಲ್ಲಿ ಅಧಿಕಾರಿಗಳ ವರ್ಗಾವಣೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.