ADVERTISEMENT

ಪೋಸ್ಕೋ ಬೇಕು: ರೈತರ ಬೇಡಿಕೆಗೆ ತಣ್ಣೀರು

​ಪ್ರಜಾವಾಣಿ ವಾರ್ತೆ
Published 13 ಜನವರಿ 2012, 10:40 IST
Last Updated 13 ಜನವರಿ 2012, 10:40 IST

ಬೆಂಗಳೂರು (ಪಿಟಿಐ): ಪೋಸ್ಕೊ ಉಕ್ಕು ಕಂಪೆನಿಗೆ ಕಾರ್ಖಾನೆ ಸ್ಥಾಪಿಸಲು ಅನುಮತಿ ನೀಡಬೇಕೆಂದು ಸರ್ಕಾರಕ್ಕೆ ತಾನು ನಿರ್ದೇಶನ ನೀಡುವುದಿಲ್ಲ ಎಂದು ಹೈಕೋರ್ಟ್ ಶುಕ್ರವಾರ ತಿಳಿಸಿದೆ.

ಗದಗ ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದ್ದ ಬಹು ಕೋಟಿ  ಪೋಸ್ಕೊ ಉಕ್ಕಿನ ಕಾರ್ಖಾನೆಗೆ ಅನುಮತಿ ನೀಡಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಸುಮಾರು 117 ಮಂದಿ ರೈತರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದ ವಿಚಾರಣೆ ವೇಳೆ ಹೈಕೋರ್ಟ್ ತಾನು ಸರ್ಕಾರಕ್ಕೆ ಈ ವಿಷಯ ಸಂಬಂಧ ಯಾವುದೇ ನಿರ್ದೇಶನ ನೀಡುವುದಿಲ್ಲ ಎಂದು ತಿಳಿಸಿದೆ.

ಮುಖ್ಯನ್ಯಾಯಮೂರ್ತಿಗಳಾದ ವಿಕ್ರಮಜಿತ್ ಸೆನ್ ಹಾಗೂ ಬಿ.ವಿ. ನಾಗರತ್ನ ಅವರು, ತಾವು ಕಾರ್ಖಾನೆಗೆ ಜಮೀನು ನೀಡಲು ಸಿದ್ದ ಎಂದು ಹೇಳಿ ಅರ್ಜಿ ಸಲ್ಲಿಸಿದ್ದ 117 ಮಂದಿ ರೈತರಿಗೆ ಈ ಸಂಬಂಧ ಸರ್ಕಾರಕ್ಕೆ ಮನವಿ ಮಾಡಿ ಎಂದು ಹೇಳಿದರು.

ಗದಗ ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದ ಫೋಸ್ಕೊ ಉಕ್ಕು ಕಾರ್ಖಾನೆಗೆ ರೈತರಿಂದ ಹಾಗೂ ತೋಂಟದ ಶ್ರೀಗಳಿಂದ ತೀವ್ರ ಪ್ರತಿಭಟನೆ ವ್ಯಕ್ತವಾಗಿದ್ದರಿಂದ 2011ರ ಜುಲೈ ತಿಂಗಳಿನಲ್ಲಿ ಸರ್ಕಾರ ಕಾರ್ಖಾನೆ ಸ್ಥಾಪನೆಗೆ ಅನುಮತಿ ನಿರಾಕರಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.