ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕೋರಿಕೆಯನ್ನು ಆರು ತಿಂಗಳಲ್ಲಿ ಪರಿಶೀಲಿಸುವುದಾಗಿ ಸರ್ಕಾರ ಹೈಕೋರ್ಟ್‌ಗೆ ಬುಧವಾರ ತಿಳಿಸಿದೆ.
‘ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರ ಸೇವೆಯನ್ನು ಕಾಯಂ ಮಾಡಬೇಕು’ ಎಂದು ಕೋರಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಗಳ ಮತ್ತು ಪುರಸಭೆಗಳ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ನಾರಾಯಣ 2006ರಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆಯನ್ನು ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಮತ್ತು ನ್ಯಾಯಮೂರ್ತಿ ರವಿ ಮಳಿಮಠ ಅವರಿದ್ದ ವಿಭಾಗೀಯ ಪೀಠ ನಡೆಸಿತ್ತು.
ಕೋರಿಕೆ ಕುರಿತು ನಿಲುವು ತಿಳಿಸುವಂತೆ ವಿಭಾಗೀಯ ಪೀಠ ಈ ಹಿಂದೆ ಸರ್ಕಾರಕ್ಕೆ ಸೂಚಿಸಿತ್ತು. ಸರ್ಕಾರದ ಹೇಳಿಕೆ ದಾಖಲು ಮಾಡಿಕೊಂಡ ಪೀಠ, ಅರ್ಜಿ ಇತ್ಯರ್ಥಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.