ADVERTISEMENT

‘ಪ್ರಜ್ವಲ್‌, ಅನಿತಾ ಸ್ಪರ್ಧೆಗೆ ಆತುರದ ನಿರ್ಧಾರವಿಲ್ಲ’

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2017, 19:30 IST
Last Updated 25 ಅಕ್ಟೋಬರ್ 2017, 19:30 IST
‘ಪ್ರಜ್ವಲ್‌, ಅನಿತಾ ಸ್ಪರ್ಧೆಗೆ ಆತುರದ ನಿರ್ಧಾರವಿಲ್ಲ’
‘ಪ್ರಜ್ವಲ್‌, ಅನಿತಾ ಸ್ಪರ್ಧೆಗೆ ಆತುರದ ನಿರ್ಧಾರವಿಲ್ಲ’   

ಹಾಸನ: ‘ಅನಿತಾ ಕುಮಾರಸ್ವಾಮಿ ಹಾಗೂ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವ ಬಗ್ಗೆ ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ. ಎಲ್ಲರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಇಲ್ಲಿ ಬುಧವಾರ ಸ್ಪಷ್ಟಪಡಿಸಿದರು.

‘ವಿಧಾನಸೌಧ ವಜ್ರ ಮಹೋತ್ಸವ ಕಾರ್ಯಕ್ರಮಕ್ಕೆ ಹೋಗುವುದಿಲ್ಲ. ಏಕೆಂದರೆ ವಿಧಾನಸೌಧ ಕಟ್ಟಿದ ಕೆಂಗಲ್ ಹನುಮಂತಯ್ಯ ಅವರನ್ನೇ ಒಳ ಪ್ರವೇಶಿಸಲು ಬಿಡದೇ ಅವಮಾನ ಮಾಡಿದರು’ ಎಂದು ಪತ್ರಿಕಾಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.

‘ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಆಯೋಗ, ಆರ್‌ಬಿಐ, ಸಿಬಿಐಗೆ ಗುಜರಾತಿಗಳನ್ನು ನೇಮಿಸಿ ನಿಯಂತ್ರಣದಲ್ಲಿ ಇಟ್ಟುಕೊಂಡಿದ್ದಾರೆ. ಗುಜರಾತ್‌ನಲ್ಲಿ ಹಾರ್ದಿಕ್‌ ಪಟೇಲ್‌ ಒಡನಾಡಿಗಳನ್ನು ಬಿಜೆಪಿಗೆ ಸೇರಿಸಿಕೊಳ್ಳಲಾಗಿದೆ. ಅಪರೇಷನ್‌ ಕಮಲದ ರೂವಾರಿ ಬಿ.ಎಸ್‌.ಯಡಿಯೂರಪ್ಪ. ಹಾಗಾಗಿ ಯಡಿಯೂರಪ್ಪ ಅವರೇ ಅಮಿತ್‌ ಷಾ ಅವರಿಗೆ ಮಾರ್ಗದರ್ಶನ ನೀಡಿರಬೇಕು’ ಎಂದು ವ್ಯಂಗ್ಯವಾಡಿದರು.

ADVERTISEMENT

ನ. 1ರಿಂದ ಕುಮಾರಸ್ವಾಮಿ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ. ಹಿರಿಯ ಮುಖಂಡ ಪಿ.ಜಿ.ಆರ್‌.ಸಿಂಧ್ಯ ಸೇರಿದಂತೆ ಹಲವು ನಾಯಕರು ಪಕ್ಷಕ್ಕೆ ಬರುತ್ತಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.