ADVERTISEMENT

ಪ್ರತ್ಯೇಕ ಕೃಷಿ ಬಜೆಟ್: ಸ್ವಾಗತ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2011, 16:25 IST
Last Updated 4 ಫೆಬ್ರುವರಿ 2011, 16:25 IST

ಶಿವಮೊಗ್ಗ: ಇದೇ ಮೊದಲ ಬಾರಿಗೆ ಸರ್ಕಾರ, ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸುತ್ತಿರುವುದನ್ನು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸ್ವಾಗತಿಸಿದೆ.

ಪ್ರತ್ಯೇಕ ಕೃಷಿ ಬಜೆಟ್‌ನಲ್ಲಿ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಿ, ಸರ್ಕಾರವೇ ಉತ್ಪನ್ನಗಳನ್ನು ಖರೀದಿಸಬೇಕು. ಮೂರು ವರ್ಷಗಳವರೆಗೆ ಇದೇ ಬೆಲೆಯನ್ನು ಅನುಸರಿಸಬೇಕು. ಕೃಷಿಗೆ ಸಂಬಂಧಿಸಿದ ಎಲ್ಲ ಸಬ್ಸಿಡಿಗಳನ್ನು ರದ್ದುಪಡಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಾಧ್ಯಕ್ಷ ಕೆ.ಟಿ. ಗಂಗಾಧರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಪ್ರತ್ಯೇಕ ಬಜೆಟ್ ಮಂಡಿಸುತ್ತಿರುವ ನಿರ್ಧಾರ ಸ್ವಾಗತಾರ್ಹ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.