ADVERTISEMENT

ಪ್ರತ್ಯೇಕ ಲಿಂಗಾಯತ ಧರ್ಮ: ರಾಜ್ಯ ಸರ್ಕಾರದ ಶಿಫಾರಸು ತಲುಪಿದೆ ಎಂದ ಗೃಹ ಸಚಿವಾಲಯ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2018, 11:35 IST
Last Updated 13 ಏಪ್ರಿಲ್ 2018, 11:35 IST
ಪ್ರತ್ಯೇಕ ಲಿಂಗಾಯತ ಧರ್ಮ: ರಾಜ್ಯ ಸರ್ಕಾರದ ಶಿಫಾರಸು ತಲುಪಿದೆ ಎಂದ ಗೃಹ ಸಚಿವಾಲಯ
ಪ್ರತ್ಯೇಕ ಲಿಂಗಾಯತ ಧರ್ಮ: ರಾಜ್ಯ ಸರ್ಕಾರದ ಶಿಫಾರಸು ತಲುಪಿದೆ ಎಂದ ಗೃಹ ಸಚಿವಾಲಯ   

ಬೆಂಗಳೂರು: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆ ಅಧ್ಯಯನ ಸಮಿತಿ ನೇಮಕ ಪ್ರಶ್ನಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಕೇಂದ್ರ ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ.ನಾವದಗಿ ನ್ಯಾಯಪೀಠಕ್ಕೆ ಮೆಮೊ ಸಲ್ಲಿಸಿದರು.

ಗೃಹ ಸಚಿವಾಲಯದ ಡೆಪ್ಯೂಟಿ ಕಾರ್ಯದರ್ಶಿ ನೀಡಿರುವ ವಿವರಣೆಯನ್ನು ನ್ಯಾಯಪೀಠಕ್ಕೆ ತಿಳಿಸಿದರು.

ADVERTISEMENT

‘ರಾಜ್ಯ ಸರ್ಕಾರದ ಶಿಫಾರಸು ತಲುಪಿದೆ’ ಎಂಬ ವಿವರಣೆ ನೀಡಿದ ಹೈಕೋರ್ಟ್‌ ವಿಚಾರಣೆಯನ್ನು ಜೂನ್ 19ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.