ADVERTISEMENT

ಪ್ರಧಾನಿಯಾಗುವೆ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಟ್ವಿಟರ್‌ನಲ್ಲಿ ವ್ಯಂಗ್ಯ

​ಪ್ರಜಾವಾಣಿ ವಾರ್ತೆ
Published 8 ಮೇ 2018, 16:27 IST
Last Updated 8 ಮೇ 2018, 16:27 IST
ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
ರಾಹುಲ್ ಗಾಂಧಿ (ಸಂಗ್ರಹ ಚಿತ್ರ)   

ಬೆಂಗಳೂರು: 2019ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಬಹುಮತದಿಂದ ಗೆದ್ದರೆ ತಾನು ಪ್ರಧಾನಿಯಾಗುವೆ ಎಂಬ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಗೆ ಟ್ವಿಟರ್‌ನಲ್ಲಿ ವ್ಯಂಗ್ಯದ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಟ್ವಿಟರ್‌ನ ಅನೇಕ ಬಳಕೆದಾರರು ರಾಹುಲ್ ಗಾಂಧಿ ಅವರ ಹೇಳಿಕೆ ಬಗ್ಗೆ ಲೇವಡಿ ಮಾಡಿದ್ದಾರೆ. ಆದರೆ, ಕೆಲವರು ರಾಹುಲ್ ಅವರನ್ನು ಬೆಂಬಲಿಸಿಯೂ ಟ್ವೀಟ್ ಮಾಡಿದ್ದಾರೆ. ಇದು #IfRahulBecomesPM ಎಂಬ ಹ್ಯಾಷ್‌ಟ್ಯಾಗ್‌ನಲ್ಲಿ ಟ್ರೆಂಡ್ ಆಗಿದೆ.

‘ರಾಹುಲ್ ಪ್ರಧಾನಿಯಾದರೆ ಭಾರತ ಆಲೂಗಡ್ಡೆ ಆಮದು ಮಾಡಿ ಚಿನ್ನ ರಫ್ತು ಮಾಡಲಿದೆ’ ಎಂದು ರಾ ಬೀಸ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.