ADVERTISEMENT

ಪ್ರವಾಹ: ಕಟ್ಟೆಚ್ಚರಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2013, 19:59 IST
Last Updated 4 ಜುಲೈ 2013, 19:59 IST

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗುರುವಾರ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, `ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಬೀಳುತ್ತಿದೆ. ನದಿಗಳ ಹರಿವಿನ ಪ್ರಮಾಣದಲ್ಲಿ ಭಾರಿ ಏರಿಕೆಯಾಗಿದೆ. ಪ್ರವಾಹ ಪರಿಸ್ಥಿತಿಯೂ ಉಂಟಾಗಿದೆ.  ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ' ಎಂದರು. ನದಿ ತೀರದ ಜನರು ಹಾಗೂ ಪ್ರವಾಹಪೀಡಿತ ಗ್ರಾಮಗಳ ಜನರ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ  ನಿರ್ದೇಶನ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.