ಬೆಂಗಳೂರು: ತುಮಕೂರು ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಅಗತ್ಯಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿರುವ ಕ್ರಮಕ್ಕೆ ವಿವಿಯನ್ನು ಹೈಕೋರ್ಟ್ ಬುಧವಾರ ತೀವ್ರ ತರಾಟೆಗೆ ತೆಗೆದುಕೊಂಡಿತು.
ಯಾವ ಆಧಾರದ ಮೇಲೆ ಈ ರೀತಿ ಪ್ರವೇಶದಲ್ಲಿ ಹೆಚ್ಚುವರಿ ಸೀಟುಗಳಿಗೆ ಅನುಮತಿ ನೀಡಲಾಗಿದೆ ಎಂದು ತಿಳಿಯಬಯಸಿರುವ ಕೋರ್ಟ್, ಹಿಂದಿನ ಹಾಗೂ ಈಗಿನ ಪ್ರವೇಶ ನಿಯಮಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಾಜರು ಪಡಿಸುವಂತೆ ವಿವಿ ಪರ ವಕೀಲರಿಗೆ ನಿರ್ದೇಶಿಸಿದೆ.
ಇತಿಹಾಸ, ಕನ್ನಡ, ವಾಣಿಜ್ಯ ಸೇರಿದಂತೆ ಒಟ್ಟು ಏಳು ವಿಷಯಗಳ ಸ್ನಾತಕೋತ್ತರ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚು ಮಾಡಿರುವುದನ್ನು ಪ್ರಶ್ನಿಸಿ ಎಂ.ದೇವರಾಜ ಎನ್ನುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಕೇಹರ್ ನೇತೃತ್ವದ ವಿಭಾಗೀಯ ಪೀಠ ನಡೆಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.