
 ಪ್ರಜಾವಾಣಿ ವಾರ್ತೆ
ಪ್ರಜಾವಾಣಿ ವಾರ್ತೆ
ಮೂಡುಬಿದಿರೆ: ಕಾಂತಾವರ ಕನ್ನಡ ಸಂಘದ ಪಟೇಲ್ ಪುನರೂರು ವಾಸುದೇವ ರಾವ್ ಟ್ರಸ್ಟ್‌ನ  ಪ್ರಾಯೋಜಕತ್ವದ 2016ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಗೆ ಪ್ರೊ. ಟಿ.ಯಲ್ಲಪ್ಪ ಆಯ್ಕೆಯಾಗಿದ್ದಾರೆ.
 
 ಯಲ್ಲಪ್ಪ ಅವರ ‘ಕಣ್ಣ ಪಾಪೆಯ ಬೆಳಕು’ ಎಂಬ ಕವನ ಸಂಕಲನ ಹಸ್ತಪ್ರತಿಯು ಪ್ರಶಸ್ತಿಗೆ ಆಯ್ಕೆಯಾಗಿದೆ ಎಂದು ಸಂಘದ ಅಧ್ಯಕ್ಷ ಡಾ.ನಾ.ಮೊಗಸಾಲೆ ಅವರು ತಿಳಿಸಿದ್ದಾರೆ.
 
 ಪ್ರಶಸ್ತಿ ₹ 10 ಸಾವಿರ ಗೌರವ ಸಂಭಾವನೆ ಮತ್ತು ಸನ್ಮಾನವನ್ನು ಒಳಗೊಂಡಿದೆ. 2017ರ ಫೆಬ್ರುವರಿ 12ರಂದು ಕಾಂತಾವರದ 'ಕನ್ನಡ ಭವನ'ದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.