ADVERTISEMENT

ಬಂದ್‌ ಕರೆಗೆ ಬೆರಳೆಣಿಕೆ ಬೆಂಬಲ

​ಪ್ರಜಾವಾಣಿ ವಾರ್ತೆ
Published 11 ಜೂನ್ 2017, 19:49 IST
Last Updated 11 ಜೂನ್ 2017, 19:49 IST
ಬಂದ್‌ ಕರೆಗೆ ಬೆರಳೆಣಿಕೆ ಬೆಂಬಲ
ಬಂದ್‌ ಕರೆಗೆ ಬೆರಳೆಣಿಕೆ ಬೆಂಬಲ   

ಬೆಂಗಳೂರು: ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಒದಗಿಸಲು ಮತ್ತು ಕಳಸಾ ಬಂಡೂರಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ‘ಕರ್ನಾಟಕ ಬಂದ್‌’ಗೆ ಬೆರಳೆಣಿಕೆಯಷ್ಟು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಬಸ್‌ ಸಂಚಾರ ಎಂದಿನಂತೆ ಇರಲಿದೆ. ಪೆಟ್ರೋಲ್‌ ಬಂಕ್‌ಗಳು, ಶಾಲಾ ಕಾಲೇಜುಗಳು, ಕೋರ್ಟ್‌ ಕಲಾಪಗಳು ನಡೆಯಲಿವೆ. ಬ್ಯಾಂಕ್‌, ಸರ್ಕಾರಿ ಕಚೇರಿಗಳಿಗೆ  ರಜೆ ಇಲ್ಲ. ಬೆಂಗಳೂರಿನಲ್ಲಿ ಟ್ಯಾಕ್ಸಿಗಳು, ಆಟೋ ಸಂಚಾರ ಇರಲಿದೆ.

ಬೆಂಬಲ ಇಲ್ಲ: ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಅಂಗನವಾಡಿ ನೌಕರರು, ಕಟ್ಟಡ ಕಾರ್ಮಿಕರು, ಆಟೋ ಚಾಲಕರ ಸಂಘ, ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ, ಕಾರ್ಖಾನೆಗಳ ಕಾರ್ಮಿಕ ಸಂಘಟನೆಗಳು, ಕರ್ನಾಟಕ ಖಾಸಗಿ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ, ಬೆಂಗಳೂರು ನಗರ ಹೋಟೆಲ್‌ ಮಾಲೀಕರ ಸಂಘ, ಎಪಿಎಂಸಿ,  ವರ್ತಕರ ಸಂಘ, ರಾಜ್ಯ ತೈಲ ವರ್ತಕರ ಸಂಘ ಬಂದ್‌ನಿಂದ ಹೊರಗುಳಿಯಲಿವೆ.

ಬೆಂಬಲ: ಬಂದ್‌ಗೆ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ, ರಾಜ್ಯ ಲಾರಿ ಮಾಲೀಕರ ಸಂಘ ಬೆಂಬಲಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.