ADVERTISEMENT

ಬಜೆಟ್ ಅಧಿವೇಶನದ ನಂತರ ಸಂಪುಟ ವಿಸ್ತರಣೆ?

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2012, 19:30 IST
Last Updated 12 ಮಾರ್ಚ್ 2012, 19:30 IST

ಬೆಂಗಳೂರು: ಬಜೆಟ್ ಅಧಿವೇಶನ ನಂತರ ಏಪ್ರಿಲ್ ಮೊದಲ ವಾರದಲ್ಲಿ ಬಹುನಿರೀಕ್ಷಿತ ಸಂಪುಟ ವಿಸ್ತರಣೆ ನಡೆಯುವುದು ಬಹುತೇಕ ಖಚಿತ ಎನ್ನಲಾಗಿದೆ.

ಕಳೆದ ತಿಂಗಳು ಇನ್ನೇನು ಸಂಪುಟ ವಿಸ್ತರಣೆ ಮಾಡಬೇಕು ಎನ್ನುವಷ್ಟರಲ್ಲೇ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಯಿತು. ಅದರ ನಂತರ ಬಜೆಟ್ ಅಧಿವೇಶನ. ಹೀಗಾಗಿ ಈ ಪ್ರಕ್ರಿಯೆ ಸ್ವಲ್ಪ ಮುಂದಕ್ಕೆ ಹೋಗಿದ್ದು, ಏಪ್ರಿಲ್ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ. ಈ ಕುರಿತು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಪಕ್ಷದ ವರಿಷ್ಠರ ಜತೆಗೂ ಚರ್ಚೆ ನಡೆಸಿದ್ದು, ಅವರು ಅದಕ್ಕೆ ಸಮ್ಮತಿ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ.

ಒಟ್ಟು 20 ಇಲಾಖೆಗಳ ಹೊರೆ ಇದ್ದು, ಅವುಗಳನ್ನು ಒಬ್ಬರೇ ನಿಭಾಯಿಸುವುದು ಕಷ್ಟ. ಹೀಗಾಗಿ ಆದಷ್ಟು ಬೇಗ ಸಂಪುಟ ವಿಸ್ತರಣೆ ಮಾಡಬೇಕು ಎಂಬ ತಮ್ಮ ತೀರ್ಮಾನದ ಬಗ್ಗೆ ವರಿಷ್ಠರ ಜತೆ ಸದಾನಂದಗೌಡ ಅವರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ADVERTISEMENT

ಅಧಿವೇಶನ ನಂತರ ಸಂಭಾವ್ಯ ಸಚಿವರ ಪಟ್ಟಿ ಸಿದ್ಧಪಡಿಸುವ ಸಿ.ಎಂ ಒಪ್ಪಿಗೆ ಪಡೆಯಲು ದೆಹಲಿಗೆ ತೆರಳಲಿದ್ದಾರೆ. ಅದಕ್ಕೂ ಮುನ್ನವೇ ಪ್ರಮುಖರ ಸಭೆ ನಡೆಸಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನೂ ಆಹ್ವಾನಿಸಲಿದ್ದಾರೆ ಎಂದು ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.