ಬೆಂಗಳೂರು: ಹೈಕೋರ್ಟ್ ತೀರ್ಪಿನ ಪ್ರಕಾರ ಶೇ 75:25ರ ಅನುಪಾತದಲ್ಲಿ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಲು ಸರ್ಕಾರ ಒಪ್ಪಿಗೆ ನೀಡಿದ್ದು, ಬಡ್ತಿ ನೀಡುವಾಗ ಕೌನ್ಸೆಲಿಂಗ್‌ನಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಚರ್ಚಿಸಲು ಇದೇ 25ರಂದು ಬೆಂಗಳೂರಿನ ಗಾಂಧಿನಗರ ಕಾರ್ಪೊರೇಷನ್ ಬಾಲಕಿಯರ ಪ್ರೌಢಶಾಲೆಯಲ್ಲಿ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಸಭೆ ಕರೆಯಲಾಗಿದೆ.
1991ರಲ್ಲಿ ಕಾಯಂಗೊಂಡ ಗುತ್ತಿಗೆ ಶಿಕ್ಷಕರ ಕಾಲ್ಪನಿಕ ವೇತನ (ಸೇವೆಗೆ ಸೇರಿದ ದಿನಾಂಕದಿಂದ) ಬಡ್ತಿಯ ಸಂಬಂಧ ಮತ್ತು ಹೆಚ್ಚುವರಿ ಶಿಕ್ಷಕರ ಹುದ್ದೆಗಳನ್ನು ಸ್ಥಳಾಂತರಿಸುವುದರಿಂದ ಉಂಟಾಗಬಹುದಾದ ತೊಂದರೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ರಾಜ್ಯ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಹೋರಾಟ ಸಮನ್ವಯ ಸಮಿತಿ ಅಧ್ಯಕ್ಷ ಕೆ.ಎಸ್. ಸತ್ಯನಾರಾಯಣ ಗುಪ್ತ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.