ADVERTISEMENT

ಬರ:ರಾಜ್ಯಕ್ಕೆ ಕೇಂದ್ರದಿಂದ ರೂ . 282 ಕೋಟಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2012, 19:10 IST
Last Updated 2 ಜುಲೈ 2012, 19:10 IST

ನವದೆಹಲಿ: `ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ~ಯಿಂದ ರಾಜ್ಯ ಬರಗಾಲ ನಿರ್ವಹಣೆಗೆ ಕೇಂದ್ರ ಸರ್ಕಾರ ಕೊನೆಗೂ 282 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.

ರಾಜ್ಯದ 107ಕ್ಕೂ ಹೆಚ್ಚು ತಾಲೂಕುಗಳಲ್ಲಿ ಮುಂಗಾರು ಮತ್ತು ಹಿಂಗಾರು ಮಳೆ ಕೈಕೊಟ್ಟು ಸುಮಾರು ಆರು ಸಾವಿರ ಕೋಟಿ ರೂಪಾಯಿ ಮೌಲ್ಯದ ಬೆಳೆ ನಷ್ಟವಾಗಿದೆ ಎಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಕೇಂದ್ರದಿಂದ 2565 ಕೋಟಿ ನೆರವು ಕೋರಿ ತಕ್ಷಣಕ್ಕೆ 1500 ಕೋಟಿ ಬಿಡುಗಡೆ ಮಾಡಲು ಕೇಳಲಾಗಿತ್ತು.

ರಾಜ್ಯದ ಮನವಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬರಗಾಲ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ತಂಡ ಕಳುಹಿಸಿತ್ತು. ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ ಈ ತಂಡ 282 ಕೋಟಿ ಬಿಡುಗಡೆಗೆ ಶಿಫಾರಸು ಮಾಡಿತ್ತು. ಈ ಶಿಫಾರಸಿನ ಹಿನ್ನೆಲೆಯಲ್ಲಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.