ADVERTISEMENT

ಬರ ಪರಿಹಾರಕ್ಕೆ ಆದ್ಯತೆ- ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 10 ಜುಲೈ 2012, 19:30 IST
Last Updated 10 ಜುಲೈ 2012, 19:30 IST

ಬೆಂಗಳೂರು: `ಬರದ ದವಡೆಗೆ ಸಿಲುಕಿರುವ ಪ್ರದೇಶಗಳ ಜನತೆಗೆ ಪರಿಹಾರ ಒದಗಿಸುವ ಕಾರ್ಯಕ್ಕೆ ಆದ್ಯತೆ ನೀಡುತ್ತೇನೆ~ ಎಂದು ನಿಯೋಜಿತ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಿಳಿಸಿದರು.

ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಅವರು, `ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರ ಸ್ಥಿತಿ ಇದೆ. ಜನರು ಅತ್ಯಂತ ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ನಾನು ಕಠಿಣ ಸವಾಲುಗಳನ್ನು ಎದುರಿಸಬೇಕಿದೆ ಎಂಬ ಅರಿವು ನನಗಿದೆ. ಬರಪೀಡಿತ ಪ್ರದೇಶದ ಜನತೆಯ ಸಮಸ್ಯೆಗಳಿಗೆ ಶೀಘ್ರದಲ್ಲಿ ಪರಿಹಾರ ಒದಗಿಸುವ ಕೆಲಸಕ್ಕೆ ಆದ್ಯತೆ ನೀಡುತ್ತೇನೆ~ ಎಂದು ಪ್ರಕಟಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.