ADVERTISEMENT

ಬರ ಪರಿಹಾರ- ಸಚಿವರಿಂದ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2012, 19:30 IST
Last Updated 7 ಏಪ್ರಿಲ್ 2012, 19:30 IST

ಬೆಂಗಳೂರು: ಗೃಹ ಸಚಿವ ಆರ್. ಅಶೋಕ ನೇತೃತ್ವದ ಸಚಿವರ ತಂಡ ಇದೇ 9ರಂದು ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಬರ ಪರಿಹಾರ ಕಾರ್ಯಕ್ರಮಗಳ ಅನುಷ್ಠಾನದ ಪರಿಶೀಲನೆ ನಡೆಸಲಿದೆ.

ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಸಚಿವರ ಮೂರು ತಂಡಗಳನ್ನು ರಚಿಸಿದ್ದು, ಅದರಲ್ಲಿ ಅಶೋಕ ನೇತೃತ್ವದ ತಂಡ ಈ 2 ಜಿಲ್ಲೆಗಳಿಗೆ ಭೇಟಿ ನೀಡಲಿದೆ. ತಂಡದಲ್ಲಿ ಸಚಿವರಾದ ಸುರೇಶಕುಮಾರ್, ಬಿ.ಎನ್.ಬಚ್ಚೇಗೌಡ ಮತ್ತು ಎಸ್.ಎ.ರವೀಂದ್ರನಾಥ್ ಇದ್ದಾರೆ.
 
ಸಚಿವರು ಸೋಮವಾರ ಬೆಳಿಗ್ಗೆ ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಅದರ ನಂತರ ಮೈಸೂರು ಜಿಲ್ಲೆಗೆ ತೆರಳಲಿದ್ದು, ಬರ ಪರಿಸ್ಥಿತಿಯನ್ನು ಅಧ್ಯಯನ ಮಾಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.