ಕಾರವಾರ: `ಬರ ಪರಿಸ್ಥಿತಿ ಎದುರಿಸುತ್ತಿರುವ ರಾಜ್ಯದ 24 ಜಿಲ್ಲೆಗಳ 123 ತಾಲ್ಲೂಕುಗಳಲ್ಲಿ 1ರಿಂದ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ರಜಾ ಅವಧಿಯಲ್ಲಿ ಬಿಸಿಯೂಟ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಶನಿವಾರ ಇಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದಕ್ಕೆ ಅಂದಾಜು ರೂ. 110 ಕೋಟಿ ಹಣ ಮೀಸಲಿಡಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಇದನ್ನು ಭರಿಸಲಿವೆ ಎಂದರು.
ಈ ಯೋಜನೆಯನ್ನು 9ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ನೀಡಲು ಸರ್ಕಾರ ನಿರ್ಧಾರ ಕೈಗೊಂಡಿಲ್ಲ.
ಸ್ಥಳೀಯ ಪರಿಸ್ಥಿತಿಗೆ ತಕ್ಕಂತೆ ನಿರ್ಧಾರಗಳನ್ನು ಕೈಗೊಳ್ಳಲು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.