ADVERTISEMENT

ಬರ: ರೂ 7.5 ಕೋಟಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2012, 19:30 IST
Last Updated 10 ಏಪ್ರಿಲ್ 2012, 19:30 IST

ಬೆಂಗಳೂರು: ಚಾಮರಾಜನಗರ ಜಿಲ್ಲೆಯಲ್ಲಿ ಬರ ಪರಿಹಾರ ಕಾರ್ಯಕ್ರಮ ಕೈಗೆತ್ತಿಕೊಳ್ಳಲು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ರೂ 7.5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಅಬಕಾರಿ ಸಚಿವ ಎಂ.ಪಿ.ರೇಣುಕಾ ಚಾರ್ಯ ತಿಳಿಸಿದರು.

ವಿಧಾನಸೌಧದಲ್ಲಿ ಮಂಗಳವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, `ಜಿಲ್ಲೆಯಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವ ಸಂಬಂಧ ಐದು ಬಾರಿ ಚುನಾಯಿತ ಪ್ರತಿನಿಧಿಗಳ ಸಭೆ ನಡೆಸಿದ್ದೇನೆ. ಈಗ ಬಿಡುಗಡೆ ಆಗಿರುವ ಅನುದಾನವನ್ನು ಸಮರ್ಪಕವಾಗಿ ವಿನಿಯೋಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ~ ಎಂದರು.

ತಮ್ಮ ಮತಕ್ಷೇತ್ರದಿಂದ ಚಾಮರಾಜನಗರ ಜಿಲ್ಲೆ ಬಹಳ ದೂರದಲ್ಲಿದೆ. ಇದರಿಂದಾಗಿ ಹೊನ್ನಾಳಿಯಲ್ಲಿನ ಕೆಲಸಗಳತ್ತ ಗಮನಹರಿಸಲು ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕೆ ಚಾಮರಾಜನಗರ ಜಿಲ್ಲಾ ಉಸ್ತುವಾರಿಯಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿತ್ತು.

ಮೂಢನಂಬಿಕೆ ಅಥವಾ ಬೇರೆ ಕಾರಣಗಳು ಮನವಿಯ ಹಿಂದಿರಲಿಲ್ಲ. ಇದೇ 13 ಮತ್ತು 14ರಂದು ಮತ್ತೆ ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಬರ ಪರಿಹಾರ ಕಾಮಗಾರಿಗಳ ಪರಿಶೀಲನೆ ನಡೆಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.