ADVERTISEMENT

ಬಸ್ ಪ್ರಯಾಣ: 60 ವರ್ಷದವರಿಗೂ ಶೇ 25 ರಿಯಾಯಿತಿ- ಆರ್.ಅಶೋಕ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2012, 19:59 IST
Last Updated 21 ಡಿಸೆಂಬರ್ 2012, 19:59 IST

ಪಿರಿಯಾಪಟ್ಟಣ:  ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಹಿರಿಯ ನಾಗರಿಕರಿಗೆ ಪ್ರಯಾಣ ದರದಲ್ಲಿ  ಶೇ 25 ರಿಯಾಯಿತಿಗೆ ಈಗಿರುವ 65 ವರ್ಷ ವಯೋಮಿತಿಯನ್ನು ಮಾಜಿ ಪ್ರಧಾನಿ ವಾಜಪೇಯಿ ಜನ್ಮದಿನದ ಅಂಗವಾಗಿ 60 ವರ್ಷಗಳಿಗೆ ಇಳಿಸಲು ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವ ಆರ್.ಅಶೋಕ ಹೇಳಿದರು. 

ತಾಲ್ಲೂಕಿನ ಕಗ್ಗುಂಡಿ ಗ್ರಾಮದಲ್ಲಿ  ಬಸ್ ಡಿಪೋಗೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಡಿಸೆಂಬರ್ 25ರಿಂದಲೇ ಈ ಯೋಜನೆ ಜಾರಿಗೆ ಬರಲಿದೆ ಎಂದು ತಿಳಿಸಿದರು.

27ರಂದು ಈಶ್ವರಪ್ಪ ಜಾಮೀನು ಅರ್ಜಿ ವಿಚಾರಣೆ

ADVERTISEMENT

ಶಿವಮೊಗ್ಗ: ಅಕ್ರಮ ಸಂಪತ್ತು ಗಳಿಕೆ ಪ್ರಕರಣದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಲೋಕಾಯುಕ್ತ ಪೊಲೀಸರು ತಕರಾರು ಅರ್ಜಿ ಸಲ್ಲಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯನ್ನು ಡಿ. 27ಕ್ಕೆ ಮುಂದೂಡಿ ಜಿಲ್ಲಾ ವಿಶೇಷ ಲೋಕಾಯುಕ್ತ ನ್ಯಾಯಾಧೀಶ ಆರ್.ಎಂ. ಶೆಟ್ಟರ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ವಕೀಲರಾದ ಅಶೋಕ್ ಭಟ್ ಹಾಗೂ ಎ.ಎಂ. ಶ್ರೀಧರ್ ಮೂಲಕ ಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಈಶ್ವರಪ್ಪ, ಅವರ ಪುತ್ರ ಕೆ.ಇ. ಕಾಂತೇಶ್ ಹಾಗೂ ಸೊಸೆ ಆರ್. ಶಾಲಿನಿ ಈ ಹಿಂದೆ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.