ADVERTISEMENT

ಬಸ್-ವಾಹನ ಡಿಕ್ಕಿ: ನಾಲ್ವರ ಸಾವು

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2012, 19:30 IST
Last Updated 12 ಮಾರ್ಚ್ 2012, 19:30 IST

ರೋಣ: ವಾಯವ್ಯ ಸಾರಿಗೆ ಸಂಸ್ಥೆ ಬಸ್ ಹಾಗೂ ಟಂ.ಟಂ. ವಾಹನ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟು, 8 ಜನರು ಗಾಯಗೊಂಡ ಘಟನೆ ತಾಲ್ಲೂಕಿನ ಹಿರೇಹಾಳ ಗ್ರಾಮದ ಹೂರವಲಯದಲ್ಲಿರುವ ಗೋಪಾಲ ಹಳ್ಳದ ಬಳಿ ಸೋಮವಾರ ರಾತ್ರಿ ನಡೆದಿದೆ.
 
ಧಾರವಾಡ ಜಿಲ್ಲೆಯ ನವಲಗುಂದ ತಾಲ್ಲೂಕಿನ ಯಮನೂರ ಗ್ರಾಮದ ರಾಜ ಚಾಂಗದೇವ ಬಾಗಸವಾರ ಉರುಸ್‌ಗೆ ಟಂ.ಟಂ. ವಾಹನದಲ್ಲಿದ್ದವರು ತೆರಳಿದ್ದರು. ಉರುಸ್ ಮುಗಿಸಿಕೊಂಡು ಮರಳಿ ತಮ್ಮ ಸ್ವಗ್ರಾಮವಾದ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಗುಡೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.