ADVERTISEMENT

ಬಹಿರಂಗ ಹೇಳಿಕೆ ಬೇಡ: ಈಶ್ವರಪ್ಪ ಮನವಿ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2012, 19:30 IST
Last Updated 11 ಆಗಸ್ಟ್ 2012, 19:30 IST

ಶಿವಮೊಗ್ಗ: `ಯಡಿಯೂರಪ್ಪ ಹಾಗೂ ಸದಾನಂದ ಗೌಡ ನಮ್ಮ ನಾಯಕರು. ಇಬ್ಬರೂ ಬಹಿರಂಗ ಹೇಳಿಕೆಗಳನ್ನು ನೀಡುತ್ತಿರುವುದರಿಂದ ಕಾರ್ಯಕರ್ತರಿಗೆ ನೋವಾಗಿದೆ~ ಎಂದು ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಯಡಿಯೂರಪ್ಪ ಹಾಗೂ ಸದಾನಂದಗೌಡ ಅವರು ಇನ್ನು ಮುಂದೆ ಬಹಿರಂಗವಾಗಿ ಹೇಳಿಕೆ ನೀಡದಂತೆ ತಾವು ಅವರಲ್ಲಿ ಪ್ರಾರ್ಥಿಸುತ್ತೇನೆ. ಸದ್ಯದಲ್ಲೇ ಇದು ಸರಿ ಹೋಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

 ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕ, ಖಾತೆಗಳ ಮರುಹಂಚಿಕೆ, ನಿಗಮ-ಮಂಡಳಿಗಳಿಗೆ ನೇಮಕಕ್ಕೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗುವುದು. ಖಾತೆ ಮರುಹಂಚಿಕೆ ದೊಡ್ಡ ಪ್ರಮಾಣದಲ್ಲಿ ನಡೆಯುವುದಿಲ್ಲ ಎಂದು ತಿಳಿಸಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.