ADVERTISEMENT

ಬಾಬಾಬುಡನ್‌ ಗಿರಿ ವಿವಾದ: ತೀರ್ಮಾನ ಪ್ರಶ್ನಿಸಿ ಕೋರ್ಟ್‌ಗೆ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2018, 19:30 IST
Last Updated 9 ಏಪ್ರಿಲ್ 2018, 19:30 IST

ಚಿಕ್ಕಮಗಳೂರು: ‘ಶ್ರೀಗುರು ದತ್ತಾತ್ರೇಯ ಬಾಬಾಬುಡನ್‌ ಸ್ವಾಮಿ ದರ್ಗಾ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ್‌ದಾಸ್‌ ನೇತೃತ್ವದ ಸಮಿತಿಯು ಸರ್ಕಾರಕ್ಕೆ ಸಲ್ಲಿಸಿದ ವರದಿ ಏಕಪಕ್ಷೀಯ ಮತ್ತು ದುರುದ್ದೇಶಪೂರಿತವಾಗಿದ್ದು, ಸರ್ಕಾರದ ತೀರ್ಮಾನವನ್ನು ದತ್ತಪೀಠ ಸಂವರ್ಧನಾ ಸಮಿತಿಯಿಂದ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು’ ಎಂದು ಶಾಸಕ ಸಿ.ಟಿ.ರವಿ ಹೇಳಿದರು.

‘ವಕೀಲರು ಪೂರ್ವಸಿದ್ಧತೆಯಲ್ಲಿ ತೊಡಗಿದ್ದು, ನಾಗಮೋಹನ್‌ದಾಸ್‌ ನೇತೃತ್ವದ ಸಮಿತಿ ವರದಿಯನ್ನು ರಾಜ್ಯ ಸರ್ಕಾರವು ಸಂಪುಟ ಸಭೆಯಲ್ಲಿ ಒಪ್ಪಿ, ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದೆ. ಸುಪ್ರೀಂ ಕೋರ್ಟ್‌ ಅದನ್ನು ಅನುಮೋದಿಸಿದೆ. ವರದಿ ಬಗ್ಗೆ ಸಹಮತ ಇಲ್ಲದಿದ್ದರೆ ಅದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುವ ಅವಕಾಶವನ್ನು ಸುಪ್ರೀಂ ಕೋರ್ಟ್‌ ಒದಗಿಸಿದೆ’ ಎಂದು ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಸಮಿತಿಯು ವಾಸ್ತವಿಕ ಸಂಗತಿ, ಕೋರ್ಟ್‌ ತೀರ್ಪುಗಳು, ಕಂದಾಯ ಮತ್ತು ಮುಜರಾಯಿ ಇಲಾಖೆ ದಾಖಲೆ ಪರಿಗಣಿಸದೆ ವರದಿ ನೀಡಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.