ADVERTISEMENT

ಬಾಲಕಿಯರ ಮೇಲೆ ಅತ್ಯಾಚಾರ, ಶೋಭಾ ಮೌನ ಪ್ರಶ್ನಿಸಿದ ಲಕ್ಷ್ಮಿ ಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2018, 8:47 IST
Last Updated 17 ಏಪ್ರಿಲ್ 2018, 8:47 IST
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ   

ಬೆಳಗಾವಿ: ಬಿಜೆಪಿ‌ ಆಡಳಿತ ಇರುವ ಉತ್ತರ ಪ್ರದೇಶ ಹಾಗೂ ಜಮ್ಮು ಕಾಶ್ಮೀರದಲ್ಲಿ‌ ನಡೆದ ಬಾಲಕಿಯರ ಮೇಲಿನ ಅತ್ಯಾಚಾರ ಸಂಬಂಧ ಸಂಸದೆ ಶೋಭಾ ಕರಂದ್ಲಾಜೆ ಅವರ ಮೌನವನ್ನು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ ಪ್ರಶ್ನಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವಿಷಯಕ್ಕೂ ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡುತ್ತಾರೆ. ಆದರೆ ಬಾಲಕಿಯರ ಮೇಲೆ ಅತ್ಯಾಚಾರ ವಿಚಾರವಾಗಿ ಸಂಸದೆ ಶೋಭಾ ಮೌನ ವಹಿಸಿರುವುದು ಎಷ್ಟು ಸರಿ. ಮಾಧ್ಯಮಗಳಲ್ಲಿ ಈ ಬಗ್ಗೆ ಸುದ್ದಿ ಪ್ರಕಟವಾಗುತ್ತಿವೆ. ಹೀಗಾಗಿ ತಕ್ಷಣವೇ ಸಂಸದೆ ಶೋಭಾ ಕರಂದ್ಲಾಜೆ ಮೌನ‌ಮುರಿಯಬೇಕು ಎಂದು‌ ಆಗ್ರಹಿಸಿದರು.

ಅವರದ್ದೆ ಪಕ್ಷದ ಮುಖಂಡರ ಹೆಸರುಗಳು ಪ್ರಕರಣದಲ್ಲಿ ಕೇಳಿಬರುತ್ತಿದೆ. ಒಬ್ಬ ಮಹಿಳೆಯಾಗಿ ಶೋಭಾ ಪ್ರತಿಕ್ರಿಯೆ ನೀಡಬೇಕು ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.