ADVERTISEMENT

ಬಾಲವನ ಪ್ರಶಸ್ತಿಗೆ ವೈದೇಹಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2017, 19:30 IST
Last Updated 4 ಅಕ್ಟೋಬರ್ 2017, 19:30 IST
ಬಾಲವನ ಪ್ರಶಸ್ತಿಗೆ ವೈದೇಹಿ ಆಯ್ಕೆ
ಬಾಲವನ ಪ್ರಶಸ್ತಿಗೆ ವೈದೇಹಿ ಆಯ್ಕೆ   

ಪುತ್ತೂರು: ಸಾಹಿತಿ ಡಾ. ಶಿವರಾಮ ಕಾರಂತರ ಹೆಸರಿನಲ್ಲಿ ನೀಡುತ್ತಿರುವ ‘ಬಾಲವನ’ ಪ್ರಶಸ್ತಿಗೆ ಹಿರಿಯ ಲೇಖಕಿ ವೈದೇಹಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ₹ 25 ಸಾವಿರ ನಗದು ಒಳಗೊಂಡಿದೆ. ಇದೇ 10ರಂದು ಇಲ್ಲಿನ ಪರ್ಲಡ್ಕದಲ್ಲಿರುವ ಬಾಲವನದ ಬಯಲು ರಂಗಮಂದಿರದಲ್ಲಿ ನಡೆಯುವ ಡಾ.ಶಿವರಾಮ ಕಾರಂತರ ಜನ್ಮದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬಾಲವನ ಸಮಿತಿಯ ಅಧ್ಯಕ್ಷರೂ ಆದ ಪುತ್ತೂರು ಉಪವಿಭಾಗಾಧಿಕಾರಿ ರಘುನಂದನ್ ಮೂರ್ತಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.