ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸುವಂತೆ ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಗುರುವಾರ ಪಕ್ಷದ ವರಿಷ್ಠರನ್ನು ಒತ್ತಾಯಿಸಿದರು.
ವಿಧಾನ ಪರಿಷತ್ತಿನ ಮೊಗಸಾಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಬಿಜೆಪಿ ಮತ್ತೊಂದು ಅವಧಿಗೆ ಅಧಿಕಾರ ಹಿಡಿಯಬೇಕಾದರೆ ಯಡಿಯೂರಪ್ಪ ಅವರಿಗೆ ಪಕ್ಷದ ನಾಯಕತ್ವ ನೀಡಬೇಕು. ಇದು ನನ್ನ ಅಭಿಪ್ರಾಯವಲ್ಲ. ಇಡೀ ರಾಜ್ಯದ ಜನತೆಯ ಒತ್ತಾಯ~ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.