ADVERTISEMENT

ಬಿಎಸ್‌ವೈ ಜಾಮೀನು ಅರ್ಜಿ ವಿಚಾರಣೆ ಅ.24ಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2011, 12:00 IST
Last Updated 21 ಅಕ್ಟೋಬರ್ 2011, 12:00 IST

ಬೆಂಗಳೂರು: ಭೂಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಲೋಕಾಯುಕ್ತ ವಿಶೇಷ ಕೋರ್ಟ್ ಜಾಮೀನು ನಿರಾಕರಿಸಿದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ಅಕ್ಟೋಬರ್ 24ಕ್ಕೆ ಮುಂದೂಡಿತು.

ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಬಿ.ವಿ.ಪಿಂಟೊ ಅವರಿದ್ದ ಏಕಸದಸ್ಯ ಪೀಠವು ವಿಚಾರಣೆಯನ್ನು  ಅಕ್ಟೋಬರ್ 24ಕ್ಕೆ ಮುಂದೂಡಿದೆ.

ವಿಚಾರಣೆಯ ವೇಳೆ ಯಡಿಯೂರಪ್ಪ ಅವರ ಪರವಾಗಿ ವಕೀಲ ಜಯಕುಮಾರ್ ಎಸ್.ಪಾಟೀಲ ಹಾಗೂ  ಸಿರಾಜಿನ್ ಬಾಷಾ ಪರ ವಕೀಲ ಸಿ.ಎಚ್. ಹನುಮಂತರಾಯ ಅವರು ವಾದ ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.