
ಪ್ರಜಾವಾಣಿ ವಾರ್ತೆಬೆಂಗಳೂರು: ಜಿಂದಾಲ್ ಸಮೂಹದ ಗಣಿ ಕಂಪೆನಿಯಿಂದ ಲಂಚ ಪಡೆದ ಆರೋಪ ಹೊತ್ತ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರರಾದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ ಹಾಗೂ ಅಳಿಯ ಸೋಹನ್ ಕುಮಾರ್ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಬಗ್ಗೆ ಹೈಕೋರ್ಟ್ ಬುಧವಾರ ಆದೇಶ ಪ್ರಕಟಿಸಲಿದೆ.
ಆರೋಪಿಗಳ ಪರ ಹಾಗೂ ಸಿಬಿಐ ಪರ ವಕೀಲರ ವಾದ, ಪ್ರತಿವಾದಗಳನ್ನು ಆಲಿಸಿ ಮುಗಿಸಿರುವ ನ್ಯಾಯಮೂರ್ತಿ ಸುಭಾಷ ಬಿ.ಅಡಿ, ಆದೇಶವನ್ನುಕಾಯ್ದಿರಿಸಿದರು.
ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಸಿಬಿಐ ವಿಶೇಷ ನ್ಯಾಯಾಲಯದ ಆದೇಶವನ್ನು ಇವರೆಲ್ಲರೂ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.