ADVERTISEMENT

ಬಿಎಸ್‌ವೈ ನಿಲುವಿಗೆ ಈಶ್ವರಪ್ಪ ಸಹಮತ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2012, 19:30 IST
Last Updated 2 ಏಪ್ರಿಲ್ 2012, 19:30 IST

ಶಿವಮೊಗ್ಗ: ಪಕ್ಷಕ್ಕೆ ಹೊಸ ಮುಖಗಳನ್ನು ಕರೆ ತರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಇಂಗಿತಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಸೋಮವಾರ ಇಲ್ಲಿ ಸಹಮತ ವ್ಯಕ್ತಪಡಿಸಿದರು.

ನಗರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಯಡಿಯೂರಪ್ಪನವರು ಈ ಹಿಂದಿನಿಂದಲೂ ರಾಜ್ಯದಲ್ಲಿ ಬಿಜೆಪಿಯನ್ನು ಬಲಿಷ್ಠವಾಗಿ ಕಟ್ಟಿ ಬೆಳೆಸಿದ್ದಾರೆ. ಮುಂದೆಯೂ ಪಕ್ಷದ ಬಲವರ್ಧನೆಗೆ ಶ್ರಮಿಸಲಿದ್ದಾರೆ~ ಎಂದರು.

`ಬಿಜೆಪಿಗೆ ಹೊಸ ಮುಖಗಳು ಬರಬೇಕಾಗಿದೆ. ಪಕ್ಷದಲ್ಲಿ ಬದಲಾವಣೆ ತರಬೇಕಾಗಿದೆ~ ಎಂಬ ಯಡಿಯೂರಪ್ಪನವರ ಹೇಳಿಕೆಯನ್ನು ತಾವು ಸ್ವಾಗತಿಸುವುದಾಗಿ ಈಶ್ವರಪ್ಪ ತಿಳಿಸಿದರು.

ADVERTISEMENT

`ಬಿಜೆಪಿಗೆ ಬೇರೆಬೇರೆ ಪಕ್ಷಗಳಿಂದ ಯುವಕರು ಸೇರ್ಪಡೆಯಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಬಲಶಾಲಿಯನ್ನಾಗಿ ಯಡಿಯೂರಪ್ಪನವರು ಮಾಡಲಿದ್ದಾರೆ~ ಎಂದೂ ಅವರು ಹೇಳಿದರು.

ರಾಜ್ಯದಲ್ಲೆಡೆ ಭೀಕರ ಬರ ಬಂದಿದೆ. ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರು ಆಯಾ ಜಿಲ್ಲಾಧಿಕಾರಿಗಳಿಗೆ ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಶಾಸಕರು ಮತ್ತು ಉಸ್ತುವಾರಿ ಮಂತ್ರಿಗಳು ಆಯಾ ಕ್ಷೇತ್ರ ಮತ್ತು ಜಿಲ್ಲೆಯಲ್ಲಿದ್ದುಕೊಂಡು, ಮೊದಲ ಆದ್ಯತೆಯಾಗಿ ಬರ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಸಲಹೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.