ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರರು ಹಾಗೂ ಅಳಿಯ ಬೆಂಗಳೂರಿನಿಂದ ಹೊರಕ್ಕೆ ಹೋಗಿಬರಲು ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ.
ಜಮೀನನ್ನು ಅಕ್ರಮವಾಗಿ ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವ (ಡಿನೋಟಿಫೈ) ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐಗೆ ಅಗತ್ಯವಿದ್ದಲ್ಲಿ, ಯಡಿಯೂರಪ್ಪ, ಅವರ ಪುತ್ರರಾದ ಬಿ.ವೈ. ರಾಘವೇಂದ್ರ, ಬಿ.ವೈ.ವಿಜಯೇಂದ್ರ ಹಾಗೂ ಅಳಿಯ ಸೋಹನಕುಮಾರ್ ಅವರು 24 ಗಂಟೆಯೊಳಗೆ ಈ ತನಿಖಾ ಸಂಸ್ಥೆ ಮುಂದೆ ಹಾಜರಾಗುವಂತೆ ನ್ಯಾಯಮೂರ್ತಿ ಸುಭಾಷ್ ಬಿ. ಅಡಿ ನಿರ್ದೇಶಿಸಿದ್ದಾರೆ. ವಿವರ ಪುಟ 5
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.