ADVERTISEMENT

ಬಿಜೆಪಿ ಅಧಿಕಾರಕ್ಕೆ ಬಂದರೆ ಎಸಿಬಿ ರದ್ದು

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2017, 19:30 IST
Last Updated 6 ಅಕ್ಟೋಬರ್ 2017, 19:30 IST

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣವೇ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸಂಸ್ಥೆಯನ್ನು ರದ್ದುಪಡಿಸಿ, ಲೋಕಾಯುಕ್ತ ಸಂಸ್ಥೆಯನ್ನೇ ಬಲಪಡಿಸಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್‌ ಗುರುವಾರ ಇಲ್ಲಿ ಹೇಳಿದರು.

‘ರಾಜ್ಯದ ಕಾಂಗ್ರೆಸ್‌ ಸರ್ಕಾರವು ಸಿಐಡಿ, ಎಸಿಬಿ ಸಂಸ್ಥೆಗಳನ್ನು ತಮಗೆ ಬೇಕಾದವರಿಗೆ ರಕ್ಷಣೆ ನೀಡಲು ಹಾಗೂ ವಿರೋಧಿಗಳನ್ನು ಮಣಿಸಲು ಬಳಸಿಕೊಳ್ಳುತ್ತಿದೆ’ ಎಂದು ದೂರಿದರು.

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿ ಒಂದು ತಿಂಗಳ ನಂತರವೂ ಹಸ್ತಾಂತರ ಮಾಡಿಲ್ಲ. ಸಚಿವ ಕೆ.ಜೆ. ಜಾರ್ಜ್‌ ಅವರನ್ನು ರಕ್ಷಿಸಲಾಗುತ್ತಿದೆ. ಸಿಬಿಐ ತನಿಖೆ ಪೂರ್ಣಗೊಳ್ಳುವವರೆಗೂ ಜಾರ್ಜ್‌ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.