ADVERTISEMENT

ಬಿಜೆಪಿ ಕೇಂದ್ರ ನಾಯಕರ ಪಾಲೆಷ್ಟು?

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2011, 19:30 IST
Last Updated 5 ಸೆಪ್ಟೆಂಬರ್ 2011, 19:30 IST

ಬೆಂಗಳೂರು: `ರಾಜ್ಯದ ಅಕ್ರಮ ಗಣಿಗಾರಿಕೆಯಲ್ಲಿ ಬಿಜೆಪಿಯ ಕೇಂದ್ರ ನಾಯಕರ ಪಾಲು ಎಷ್ಟಿದೆ ಎಂಬುದು ಗೊತ್ತಾಗಬೇಕಾದರೆ ಇದರ ತನಿಖೆಯನ್ನು ಸಿಬಿಐಗೆ ವಹಿಸಬೇಕು~ ಎಂದು ವಿಧಾನ ಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ ಮತ್ತು ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಒತ್ತಾಯಿಸಿದರು.

ರಾಜ್ಯದ ಅಕ್ರಮ ಗಣಿಗಾರಿಕೆಯಿಂದ ಬಿಜೆಪಿ ಕೇಂದ್ರ ನಾಯಕರು ಕಪ್ಪ ಪಡೆದುಕೊಂಡಿಲ್ಲ ಎಂದಾದರೆ, ಇಲ್ಲಿನ ಅಕ್ರಮ ಗಣಿಗಾರಿಕೆ ಪ್ರಕರಣದ ಸಂಪೂರ್ಣ ತನಿಖೆಯನ್ನು ಸಿಬಿಐಗೆ ವಹಿಸಲಿ ಎಂದರು. ರೆಡ್ಡಿ ಸಹೋದರರು ನಡೆಸಿರುವ ಅಕ್ರಮ ಗಣಿಗಾರಿಕೆಯಿಂದಾಗಿ ರಾಷ್ಟ್ರಕ್ಕೆ ಒಂದು ಲಕ್ಷ ಕೋಟಿ ರೂಪಾಯಿಗೂ ಹೆಚ್ಚಿನ ನಷ್ಟ ಉಂಟಾಗಿದೆ. ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತ ವರದಿ ಸಲ್ಲಿಕೆಯಾಗಿ ತಿಂಗಳು ಕಳೆದಿದ್ದರೂ ಇನ್ನೂ ಯಾವುದೇ ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದು ಹೇಳಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.