ADVERTISEMENT

‘ಬಿಜೆಪಿ ಗೆದ್ದರೆ ಟಿಪ್ಪು ಜಯಂತಿ ನಿಷೇಧ’

​ಪ್ರಜಾವಾಣಿ ವಾರ್ತೆ
Published 9 ಮೇ 2018, 17:38 IST
Last Updated 9 ಮೇ 2018, 17:38 IST
ಹೊಸಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ ಉದ್ಘಾಟಿಸಿದರು
ಹೊಸಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ ಉದ್ಘಾಟಿಸಿದರು   

ಹೊಸಪೇಟೆ: ‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಟಿಪ್ಪು ಸುಲ್ತಾನ್‌ ಜಯಂತಿ ನಿಷೇಧಿಸಲಾಗುವುದು’ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದರು.

ಬುಧವಾರ ಇಲ್ಲಿ ಬಿಜೆಪಿ ಅಭ್ಯರ್ಥಿ ಎಚ್‌.ಆರ್‌.ಗವಿಯಪ್ಪ ಪರ ಮತಯಾಚಿಸಿ ಅವರು ಮಾತನಾಡಿದರು.

‘ಕಾಂಗ್ರೆಸ್‌ಗೆ ಅಭಿವೃದ್ಧಿ ಬೇಕಿಲ್ಲ. ಜಾತಿಗಳ ಹೆಸರಿನಲ್ಲಿ ಸಮಾಜ ಒಡೆಯುವುದು ಅದರ ಕೆಲಸವಾಗಿದೆ. ಒಂದು ಕಡೆ ಹನುಮ ಜಯಂತಿ ಮೇಲೆ ನಿರ್ಬಂಧ ವಿಧಿಸುತ್ತದೆ. ಇನ್ನೊಂದು ಕಡೆ ಟಿಪ್ಪು ಜಯಂತಿ ಆಚರಿಸುತ್ತದೆ’ ಎಂದು ಅವರು ಟೀಕಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.