ADVERTISEMENT

ಬಿಜೆಪಿ ಢೋಂಗಿಗಳ ಪಕ್ಷ: ಸಿದ್ದರಾಮಯ್ಯ ಲೇವಡಿ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2017, 11:19 IST
Last Updated 22 ಅಕ್ಟೋಬರ್ 2017, 11:19 IST
ಬಿಜೆಪಿ ಢೋಂಗಿಗಳ ಪಕ್ಷ: ಸಿದ್ದರಾಮಯ್ಯ ಲೇವಡಿ
ಬಿಜೆಪಿ ಢೋಂಗಿಗಳ ಪಕ್ಷ: ಸಿದ್ದರಾಮಯ್ಯ ಲೇವಡಿ   

ಮಂಗಳೂರು: ‘ಬಿಜೆಪಿ ಢೋಂಗಿಗಳ ಪಕ್ಷ. ಹೇಳುವುದೇ ಒಂದು, ಮಾಡುವುದೇ ಇನ್ನೊಂದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೇವಡಿ ಮಾಡಿದರು.

ಬಂಟ್ವಾಳದಲ್ಲಿ ಭಾನುವಾರ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿ ಸಿಎಂ ಮಾತನಾಡಿದರು.

‘ಬಿಜೆಪಿ ನಾಯಕರು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಅವರು ಮಾಡುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಆಧಾರರಹಿತ ಆರೋಪ ಮಾಡುವುದು ಕಳ್ಳರಿಂದ ಮಾತ್ರ ಸಾಧ್ಯ’ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ಸಬ್ ಕಾ ಸಾಥ್- ಸಬ್ ಕಾ ವಿಕಾಸ್, ಮನ್ ಕಿ ಬಾತ್ ಕೇವಲ ಪ್ರಚಾರ. ಅವರಿಗೆ ಸಂವಿಧಾನದಲ್ಲಿ ನಂಬಿಕೆ ಇಲ್ಲ. ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರು ಸರ್ಕಾರಕ್ಕೆ ಪತ್ರ ಬರೆದು, ತಮ್ಮ ಹೆಸರು ಹಾಕದಂತೆ ಹೇಳುತ್ತಾರೆ. ಇದು ಸಂವಿಧಾನದ ಮೇಲಿರುವ ಗೌರವವೇ’ ಎಂದು ಪ್ರಶ್ನಿಸಿದರು.

‘ಆರ್‌ಎಸ್‌ಎಸ್‌ನವರು ದೇಶ ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಪ್ರಧಾನಿ ಮೋದಿ ಕುಮ್ಮಕ್ಕು ನೀಡುತ್ತಿದ್ದಾರೆ. ಇದನ್ನು ಹಿಮ್ಮೆಟ್ಟಿಸುವ ಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು’ ಎಂದು ಸಿಎಂ ಹೇಳಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.