ADVERTISEMENT

ಬಿಜೆಪಿ ಭ್ರಷ್ಟರ ಪರ, ಕಾಂಗ್ರೆಸ್ ಬಡವರ ಪರ: ರಾಹುಲ್ ಗಾಂಧಿ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2018, 13:10 IST
Last Updated 4 ಏಪ್ರಿಲ್ 2018, 13:10 IST
ರೋಡ್‌ ಶೋಗೂ ಮುನ್ನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಡಾ.ಶಿವಕುಮಾರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು
ರೋಡ್‌ ಶೋಗೂ ಮುನ್ನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಡಾ.ಶಿವಕುಮಾರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು

ತುಮಕೂರು: ಕಾಂಗ್ರೆಸ್ ಪಕ್ಷವು ದೇಶದ ಬಡವರ ಏಳಿಗೆಗೆ ಹೋರಾಟ ನಡೆಸಿದ್ದರೆ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರ ಭ್ರಷ್ಟರ ರಕ್ಷಣೆಗೆ ನಿಂತಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದರು.

ನಗರದ ಭದ್ರಮ್ಮ ವೃತ್ತದಿಂದ ಟೌನ್ ಹಾಲ್ ವರೆಗೆ ರೋಡ್ ಶೋ ನಡೆಸಿದ ಅವರು ಟೌನ್ ಹಾಲ್ ವೃತ್ತ(ಬಿಜಿಎಸ್ ವೃತ್ತ)ದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಬಡವರಿಗಾಗಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆ. ಅನ್ನಭಾಗ್ಯ ಯೋಜನೆಯಡಿ ಕುಟುಂಬದ ಪ್ರತಿಯೊಬ್ಬರಿಗೆ 7 ಕೆ.ಜಿ ಅಕ್ಕಿ ಕೊಡುತ್ತಿದೆ. ಬಡವರಿಗಾಗಿ ಇಂತಹ ಅನೇಕ ಯೋಜನೆ ರೂಪಿಸಿ ಕೆಲಸ ಮಾಡುತ್ತಿದೆ ಎಂದರು.

ADVERTISEMENT

(ತುಮಕೂರಿನಲ್ಲಿ ರೋಡ್‌ ಶೋಗೂ ಮುನ್ನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಡಾ.ಶಿವಕುಮಾರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು)

ಅದರೆ, ಕೇಂದ್ರದ ನರೇಂದ್ರ ಮೋದಿ ಸರ್ಕಾರ ಭ್ರಷ್ಟರ ರಕ್ಷಣೆಗೆ ಟೊಂಕ ಕಟ್ಟಿ ನಿಂತಿದೆ. ನೀರವ್ ಮೋದಿ ₹30 ಸಾವಿರ ಕೋಟಿ, ವಿಜಯ್ ಮಲ್ಯ, ಲಲಿತ್ ಮೋದಿ ಅವರು ನೂರಾರು ಕೋಟಿ ಜನರ ದುಡ್ಡು ಲೂಟಿ ಹೊಡೆದಿದ್ದಾರೆ. ಅವರೆಲ್ಲ ದೇಶ ಬಿಟ್ಟು ಹೊರ ರಾಷ್ಟ್ರದಲ್ಲಿ ನೆಲೆಸಿದ್ದಾರೆ.

ರಾಜಸ್ಥಾನದ ಬಿಜೆಪಿ ಮುಖ್ಯಮಂತ್ರಿ ಮಗನಿಗೇ ಲಲಿತ್ ಮೋದಿ ಹಣ ಕೊಟ್ಟಿದ್ದಾನೆ. ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಮಗಳೇ ನೀರವ್ ಮೋದಿ ವಕೀಲೆಯಾಗಿದ್ದಾಳೆ. ಇದೆಲ್ಲವೂ ಬಿಜೆಪಿ ಭ್ರಷ್ಟರ ಪರವಾಗಿದೆ ಎಂಬುದಕ್ಕೆ ಉದಾಹರಣೆಗಳು ಎಂದು ವಾಗ್ದಾಳಿ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಲ್ಲವೂ ಗೊತ್ತಿದ್ದರೂ ಏನೂ ಕ್ರಮ ಜರುಗಿಸಿಲ್ಲ. ಇಂತಹವರು ಹೇಗೆ ಭ್ರಷ್ಟಾಚಾರ ನಿರ್ಮೂಲನೆ ಮಾಡಿಯಾರು? ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್, ಸಚಿವರಾದ ಡಿ.ಕೆ ಶಿವಕುಮಾರ್, ರಾಜ್ಯ ಉಸ್ತುವಾರಿ ವೇಣುಗೊಪಾಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.