
ಪ್ರಜಾವಾಣಿ ವಾರ್ತೆಬೆಂಗಳೂರು: ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ವ್ಯಾಪ್ತಿಯ ಪ್ರಮುಖ ಬಿಜೆಪಿ ಮಹಿಳಾ ಕಾರ್ಯಕರ್ತರ ಸಮಾವೇಶವನ್ನು ಇದೇ 31ರಂದು ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದು, ಅದನ್ನು ಲೋಕಸಭೆ ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಉದ್ಘಾಟಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ರೀನಾ ಪ್ರಕಾಶ್ ಶುಕ್ರವಾರ ಇಲ್ಲಿ ತಿಳಿಸಿದರು.
ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆ ಸ್ಮೃತಿ ಇರಾನಿ, ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.